August 17, 2026

ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಸಭೆ: ಬ್ಯಾನರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಭಾವಚಿತ್ರ ನಾಪತ್ತೆ

0
image_editor_output_image1203963467-1662964727902.jpg

ರಾಯಚೂರು: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಿಮಿತ್ತ ಕರೆದ ಅಳವಡಿಸಿದ ಬ್ಯಾನರ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಭಾವಚಿತ್ರ ಕಾಣೆಯಾಗಿದೆ.

ಎಐಸಿಸಿ ಕಾರ್ಯದರ್ಶಿ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ ಐಕ್ಯತಾ ಯಾತ್ರೆ ನಿಮಿತ್ತ ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿ ಕರೆದಿದ್ದು, ಬ್ಯಾನರ್ ಹಾಕಲಾಗಿದೆ.

ಆದರೆ, ಸ್ಥಳೀಯ ನಾಯಕರ ಕಣ್ತಪ್ಪಿನಿಂದ ಆಗಿದೆಯೋ ಅಥವಾ ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆಯೋ, ಮಾಜಿ ಸಿಎಂ ಸಿದ್ದರಾಮಯ್ಯ ಭಾವಚಿತ್ರ ಮಾತ್ರ ಕಾಣೆಯಾಗಿದೆ. ಉಳಿದೆಲ್ಲರ ಗಣ್ಯರ ಭಾವಚಿತ್ರ ಹಾಕಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!