March 23, 2026

ಇಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡ: 7 ಮಂದಿ ಸಾವು, ಹಲವರು ಗಾಯ

0
image_editor_output_image-1780586282-1663041671919.jpg

ಹೈದರಾಬಾದ್: ಎಲೆಕ್ಟ್ರಿಕ್ ಬೈಕ್ ಶೋರೂಮ್ ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಸಿಕಂದರಾಬಾದ್ ನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ನಾಲ್ಕು ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಮ್ ಇದ್ದು ಇಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ ಅಲ್ಲದೆ ಕಟ್ಟಡದ ಮೊದಲ ಮಹಡಿಯಲ್ಲಿ ಹೋಟೆಲ್ ಇದ್ದು ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇದ್ದುದರಿಂದ ಸಾವು ನೋವು ಸಂಭವಿಸಿದೆ.

ಹೈದರಾಬಾದ್ ನಗರ ಪೊಲೀಸ್ ಆಯುಕ್ತ ಸಿ.ವಿ ಆನಂದ್ ಹೇಳಿಕೆಯಂತೆ ಈ ದುರ್ಘಟನೆಯಲ್ಲಿ ಇದುವರೆಗೂ ಮಹಿಳೆಯರು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವು ಮಂದಿ ಗಾಯಗೊಂಡಿದ್ದು ಅವರನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಹೊಟೇಲ್ ರೂಬಿಯಲ್ಲಿದ್ದ ಅತಿಥಿಗಳಿಗೆ ದಟ್ಟ ಹೊಗೆ ಆವರಿಸಿದ್ದರಿಂದ ಹೆಚ್ಚಿನವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೆಲವರು ಕಿಟಕಿಯ ಗಾಜುಗಳನ್ನು ಒಡೆದು ಕೆಳಗೆ ಹಾರಿದ್ದಾರೆ, ಅವರಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇನ್ನು ಕೆಲವರು ಕೊಠಡಿಗಳಲ್ಲಿ ಸಿಲುಕಿದ್ದರು ಅವರನ್ನು ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!