March 23, 2026

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ತ್ಯಾಜ್ಯ ಎಸೆತ: ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

0
IMG-20220913-WA0006

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಮಾಣಿ ಸಮೀಪದ ಹೋಟೆಲ್ ವೊಂದರ ನೌಕರರು ತ್ಯಾಜ್ಯ ಎಸೆಯುವಾಗ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ಸೆ.12 ರ ಮಧ್ಯರಾತ್ರಿ ನಡೆದಿದೆ.

ಕೆಲ ಸಮಯಗಳಿಂದ ಈ ಭಾಗದಲ್ಲಿ ತ್ಯಾಜ್ಯ ಎಸೆಯುತ್ತಿರುವ ಬಗ್ಗೆ ಗಮನಿಸುತ್ತಿದ್ದ ಸಾರ್ವಜನಿಕರು ತ್ಯಾಜ್ಯ ಎಸೆಯುವವರನ್ನು ರೆಡ್ ಹ್ಯಾಂಡಾಗಿ ಹಿಡಿಯಬೇಕು ಎಂದು ಕಾಯುತ್ತಿದ್ದರು, ಈ ವೇಳೆ ನಿನ್ನೆ ತಡರಾತ್ರಿ ತ್ಯಾಜ್ಯ ಎಸೆಯಲು ಬಂದ ಹೋಟೆಲ್ ನೌಕರರು ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದರೆನ್ನಲಾಗಿದೆ.

ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ರಸ್ತೆ ಬದಿ ತ್ಯಾಜ್ಯ ಎಸೆಯುತ್ತಿದ್ದವರನ್ನು ಠಾಣೆಗೆ ಕರೆದೊಯ್ಯಿದಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!