March 24, 2026

ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು: ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ

0
image_editor_output_image-81263320-1663125231948

ಮುಲ್ಕಿ : ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಗಡಿ ಜಂಕ್ಷನ್ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ.

ಮೃತ ಬೈಕ್ ಸವಾರನನ್ನು ಪಕ್ಷಿಕೆರೆ ಹೊಸಕಾಡುನಿವಾಸಿ ಚರಣ್ (29) ಎಂದು ಗುರುತಿಸಲಾಗಿದೆ. ಗಾಯಾಳು ಬೈಕ್ ಸವಾರ ಮಂಗಳೂರು ಕಡೆಯಿಂದ ಪಕ್ಷಿಕೆರೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದು ಹಳೆಯಂಗಡಿ ಜಂಕ್ಷನ್ ಬಳಿ ಉಡುಪಿ ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ಟ್ಯಾಂಕರ್ ನ ಚಕ್ರದಡಿಗೆ ಸಿಲುಕಿದ್ದು ಸವಾರ ಚರಣ್ ರಾಜ್ ಗಂಭೀರ ಗಾಯಗೊಂಡು ಮುಕ್ಕ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!