February 4, 2026

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 9 ಮಂದಿ ಸ್ಥಳದಲ್ಲೇ ಸಾವು, 8 ಮಂದಿ ಗಾಯ

0
image_editor_output_image10381135-1663143587542.jpg

ಶ್ರೀನಗರ : ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸಂಭವಿಸಿದೆ.

ಬಸ್ಸು ಪ್ರಾಣಿಕರನ್ನು ಹೊತ್ತು ಸಾವ್ಜಿಯಾನ್‌ನಿಂದ ಮಂಡಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಘಟನೆ ನಡೆದ ಕೂಡಲೇ ಸ್ಥಳೀಯರು, ಪೊಲೀಸರು ಮತ್ತು ಸೇನೆ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆ ಕುರಿತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಟ್ವೀಟ್ ಮೂಲಕ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳನ್ನು ನೀಡಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!