March 24, 2026

ರ್‍ಯಾಲಿಯಲ್ಲಿ ಪೊಲೀಸರ ಮೇಲೆ ಹಲ್ಲೆ, ಪೊಲೀಸ್ ವಾಹನಕ್ಕೆ ಬೆಂಕಿ: ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

0
image_editor_output_image2025031729-1663149833335.jpg

ಕೋಲ್ಕತ್ತಾ: ಬಿಜೆಪಿಯ ರ್‍ಯಾಲಿಯಲ್ಲಿ ಪೊಲೀಸರ ಮೇಲೆ ಹಲ್ಲೆ ಮತ್ತು ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬುಧವಾರ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಲಿಯಾಘಾಟಾ, ಟಾಪ್ಸಿಯಾ ಮತ್ತು ಬೌಬಜಾರ್ ಪ್ರದೇಶಗಳಲ್ಲಿ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಇಂದು ಬ್ಯಾಂಕ್‌ಶಾಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ವಿವರ: ಕೋಲ್ಕತ್ತಾ ಪೊಲೀಸರು ಹೌರಾ ಸೇತುವೆ ಬಳಿ ಬಿಜೆಪಿ ರ್‍ಯಾಲಿಯನ್ನು ತಡೆದಾಗ, ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಬಳಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

Leave a Reply

Your email address will not be published. Required fields are marked *

error: Content is protected !!