ಢಿಕ್ಕಿ ಹೊಡೆದು ಬೈಕನ್ನು ಎಳೆದೊಯ್ದ ಲಾರಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಲಾರಿ ಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮೆಕ್ರಿ ಸರ್ಕಲ್ ಬಳಿ ಈ ದುರ್ಘಟನೆ ನಡೆದಿದೆ. ಮೃತನನ್ನು ಸುಮನ್ ಬಾಲಿಕ್ ಎಂದು ಗುರುತಿಸಲಾಗಿದ್ದು, ಪಶ್ಚಿಮ ಬಂಗಾಳ ಮೂಲದವನಾಗಿರುವ ಸುಮನ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯ ಉದ್ಯೋಗಿದ್ದನು.
ಸುಮನ್ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾಗಿತ್ತು. ಹೀಗಾಗಿ ಆತ ಶೆಲ್ ಪೆಟ್ರೊಲ್ ಬಂಕ್‍ನಿಂದ ಬಾಟ್ಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಒನ್ ವೇಯಲ್ಲಿ ಹೋಗುತ್ತಿದ್ದ. ಈ ವೇಳೆ ಎದುರಿನಿಂದ ಬಂದ ಎಪಿ 04 ಯುಬಿ 1189 ನಂಬರ್ ನ ಲಾರಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಅಶೋಕ್ ಲೈಲಾಂಡ್ ಲಾರಿ ಕೆಳಗೆ ಸಿಲುಕಿಕೊಂಡು ಉಜ್ಜಿಕೊಂಡು ಹೋಗಿದೆ.
ಬೈಕ್ ಉಜ್ಜಿಕೊಂಡು ಹೋದ ಹಿನ್ನೆಲೆಯಲ್ಲಿ ಬೈಕ್ ಸ್ಪಾರ್ಕ್ ಆಗಿದೆ. ಸ್ಪಾರ್ಕ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು ಬೈಕ್ ಹಾಗೂ ಲಾರಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಘಟನೆ ಬಳಿಕ ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.




