ವಾಯುಭಾರ ಕುಸಿತ:
ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ನ.11 ರ ವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಪುದುಚೆರಿಯಲ್ಲಿ ನವೆಂಬರ್ 11ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆಯಾಗಲಿದ್ದು, ತಮಿಳುನಾಡು, ಮಹಾರಾಷ್ಟ್ರ, ಪುದುಚೆರಿ, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕರಾವಳಿಯಲ್ಲಿ ನವೆಂಬರ್ 11ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ನವೆಂಬರ್ 10ರಿಂದ 11ರ ಅವಧಿಯಲ್ಲಿ ತಮಿಳುನಾಡಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆ ಉಂಟಾಗಿದೆ. ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ಆಗ್ನೇಯ ಬಂಗಾಳ ಕೊಲ್ಲಿ ಮತ್ತು ನೆರೆಹೊರೆಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಯಿದೆ.