September 27, 2026

ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಪೇದೆ ಮೃತದೇಹ ಪೊದೆಯಲ್ಲಿ ಪತ್ತೆ

0
image_editor_output_image325526599-1663392665431.jpg

ಹಾಸನ: ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಪೇದೆ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಸುಧಾ (39) ಮೃತ ಮಹಿಳಾ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿಯ ಪೊದೆಯೊಂದರಲ್ಲಿ ಸುಧಾ ಮೃತದೇಹ ಸಿಕ್ಕಿದೆ.

 

ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸುಧಾ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚೆಗಷ್ಟೇ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಇದೀಗ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಧಾರನ್ನು ಕಾರಿನಲ್ಲಿ ಕರೆದುಕೊಂಡು ಬಂದು ಅವರ ಚಿಕ್ಕಪ್ಪನ ಮಗ ಮಂಜುನಾಥ್ ಹತ್ಯೆಗೈದಿದ್ದಾನೆ ಎಂಬ ವಿಚಾರ ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!