February 2, 2026

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಪ್ಪು ಬಟ್ಟೆ ಪ್ರದರ್ಶನ: ಹಲವರನ್ನು ವಶಕ್ಕೆ ಪಡೆದ ಪೊಲೀಸರು

0
image_editor_output_image1840333447-1663393231520.jpg

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಎಸ್‌ವಿಪಿ ವೃತ್ತದಲ್ಲಿನ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ವೇಳೆ ತಳವಾರ, ಕೋಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದರು.

ಕೋಲಿ, ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡದ ಮುಖ್ಯಮಂತ್ರಿಗೆ ಧಿಕ್ಕಾರ, ಮಾತು ತಪ್ಪಿದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ತಕ್ಷಣವೇ ಅವರನ್ನು ಪೊಲೀಸರು ವಶಕ್ಕೆ ಪಡೆದು, ಅಲ್ಲಿಂದ ಕರೆದೊಯ್ದರು.

ತಳವಾರ ಎಸ್‌ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಸರ್ದಾರ್ ರಾಯಪ್ಪ ಸೇರಿದಂತೆ ಇತರರನ್ನು ವಶಕ್ಕೆ ಪಡೆದರು.

Leave a Reply

Your email address will not be published. Required fields are marked *

error: Content is protected !!