ಆಟೋ ಪ್ರಯಾಣ ದರ ಕನಿಷ್ಠ 25 ರಿಂದ 30 ರೂ. ಗೆ ಏರಿಕೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಟೋ ಪ್ರಯಾಣಿಕರಿಗೆ ದರ ಏರಿಕೆ ಶಾಕ್ ನೀಡಲಾಗಿದ್ದು, ನಗರದಲ್ಲಿ ಕನಿಷ್ಠ ಆಟೋ ದರವನ್ನು (ಎರಡು ಕಿಲೋಮೀಟರ್ ಗೆ) 25 ರೂಪಾಯಿಂದ 30 ರೂಪಾಯಿಗೆ ಹೆಚ್ಚಿಸಲಾಗಿದೆ.
ಮೊದಲ ಎರಡು ಕಿಲೋಮೀಟರ್ ಗೆ 30 ರುಪಾಯಿ ನಿಗದಿ ಮಾಡಿದ್ದು, ನಂತರ ಪ್ರತಿ ಕಿಲೋಮೀಟರ್ ಗೆ 15 ರೂಪಾಯಿ ಹೆಚ್ಚುವರಿ ದರ ನಿಗದಿಯಾಗಿದೆ. ಪರಿಷ್ಕೃತ ದರ ಡಿಸೆಂಬರ್ 1ರಿಂದ ಜಾರಿಗೆ ಬರಲಿದೆ. ಬೆಲೆ ಏರಿಕೆಯಿಂದ ಜನತೆ ತತ್ತರಿಸುತ್ತಿರುವಾಗಲೇ ಗಾಯದ ಮೇಲೆ ಬರೆ ಎಳೆದಂತೆ ಇದೀಗ ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದೆ.





