August 12, 2026

ಮಂಗಳೂರು: ಪಿಯು ಕಾಲೇಜಿನ ವಿದ್ಯಾರ್ಥಿಗೆ ಚೂರಿ ಇರಿತ: ಇಬ್ಬರು ವಿದ್ಯಾರ್ಥಿಗಳಿಂದ ಕೃತ್ಯ

0
first-information-report

ಮಂಗಳೂರು: ನಗರದ ನಂತೂರು ಜಂಕ್ಷನ್‌ ಬಳಿ ಪ.ಪೂ.ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗೆ ಮತ್ತೊಂದು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚೂರಿ ಇರಿದು ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ.

ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜು ಬಿಟ್ಟು ತನ್ನ ಗೆಳೆಯರೊಂದಿಗೆ ನಂತೂರು ಜಂಕ್ಷನ್‌ ಕಡೆಗೆ ನಡೆದುಕೊಡು ಹೋಗುತ್ತಿದ್ದಾಗ ಮತ್ತೊಂದು ಪ.ಪೂ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಬಂದು ಮಾತನಾಡಲು ಇದೆ ಎಂದು ಹೇಳಿ ದೈವಸ್ಥಾನದ ಹಿಂಭಾಗಕ್ಕೆ ಕರೆದುಕೊಂಡು ಹೋಗಿ ಅವರ ಜೇಬಿನಲ್ಲಿದ್ದ ಚೂರಿಯಿಂದ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿಯು ಮತ್ತೊಂದು ಕಾಲೇಜಿನಲ್ಲಿರುವ ತನ್ನ ಗೆಳೆಯನಿಗೆ ಅದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಬೆದರಿಕೆ ಹಾಕಿದ ವಿಷಯವಾಗಿ ಗೆಳೆಯರೊಂದಿಗೆ ಹೋಗಿ ಸಮಾಧಾನ ಮಾಡಿ ಬಂದಿದ್ದು, ಇದರಿಂದ ಕೋಪಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಕೊಲೆ ಮಾಡುವ ಉದ್ದೇಶದಿಂದ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ,

ಈ ಬಗ್ಗೆ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!