August 12, 2026

ವಿದ್ಯಾರ್ಥಿನಿಯರ ವೀಡಿಯೊ ವೈರಲ್: ವಿದ್ಯಾರ್ಥಿನಿ ಸೇರಿ ಮೂವರ ಬಂಧನ

0
image_editor_output_image2117256410-1663558066947.jpg

ಚಂಡೀಗಡ: ಹಲವು ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ವಿದ್ಯಾರ್ಥಿನಿಯೊಬ್ಬರು ಚಿತ್ರೀಕರಿಸಿದ್ದಾರೆ ಎಂಬ ಪ್ರಕರಣದಲ್ಲಿ ಪ್ರಾಥಮಿಕ ತನಿಖೆಯ ಬಳಿಕ ಪೊಲೀಸರು ವಿದ್ಯಾರ್ಥಿನಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಪಂಜಾಬ್‌ನ ಮೊಹಾಲಿಯ ಚಂಡೀಗಡ ವಿಶ್ವವಿದ್ಯಾಲಯದ ಮಹಿಳಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬರು ಇತರರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರಿಕರಿಸಿ ತನ್ನ ಗೆಳೆಯರಿಗೆ ಕಳುಹಿಸಿದ್ದರು ಎಂಬ ವದಂತಿ ಹರಡಿತ್ತು.

ಒಬ್ಬ ವಿದ್ಯಾರ್ಥಿನಿಯು ತನ್ನ ವಿಡಿಯೊವನ್ನು ಯುವಕನೊಬ್ಬನ ಜೊತೆ ಹಂಚಿಕೊಂಡಂತೆ ಕಾಣಿಸುತ್ತಿದೆ. ಇತರ ಯಾವುದೇ ವಿದ್ಯಾರ್ಥಿನಿಯ ಆಕ್ಷೇಪಾರ್ಹವಾದ ವಿಡಿಯೊ ಸಿಕ್ಕಿಲ್ಲ ಎಂದು ಪಂಜಾಬ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ ಗುರ್‌ಪ್ರೀತ್‌ ಕೌರ್‌ ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!