August 12, 2026

ಜಪ್ಪಿನಮೊಗರು: ಬೈಕ್ ಸ್ಕಿಡ್ ಆಗಿ ಯುವಕ ಸ್ಥಳದಲ್ಲೇ ಮೃತ್ಯು

0
image_editor_output_image1582373284-1663567938714.jpg

ಮಂಗಳೂರು: ಬೈಕ್ ಸ್ಕಿಡ್ ಆಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾ.ಹೆ. 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಸೋಮವಾರ ಮುಂಜಾನೆ ನಡೆದಿದೆ.

ತೊಕ್ಕೊಟ್ಟಿನ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಇನ್ನೊಬ್ಬ ಸಹ ಸವಾರ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ರೂಮ್ ಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಬೈಕ್ ಸ್ಕಿಡ್ ಆಗಿ ಇಬ್ಬರೂ ಬಿದ್ದಿದ್ದಾರೆ.

ಪರಿಣಾಮ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಭಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!