March 24, 2026

ಅಪಾರ್ಟ್ ಮೆಂಟ್ ಕಟ್ಟಡದ ಆವರಣದ ಗೋಡೆ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಸಾವು

0
image_editor_output_image-1851752040-1663654590303.jpg

ನವದೆಹಲಿ:ಅಪಾರ್ಟ್ ಮೆಂಟ್ ಕಟ್ಟಡದ ಆವರಣದ ಗೋಡೆ ಕುಸಿದು ಬಿದ್ದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಂಗಳವಾರ (ಸೆಪ್ಟೆಂಬರ್ 20) ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ನೋಯ್ಡಾದ ಸೆಕ್ಟರ್ 21ರಲ್ಲಿ ಬೃಹತ್ ಹೌಸಿಂಗ್ ಕಾಂಪ್ಲೆಕ್ಸ್ ನಿರ್ಮಾಣವಾಗುತ್ತಿದ್ದು, ಈ ಸಂದರ್ಭದಲ್ಲಿ ರೆಸಿಡೆನ್ಶಿಯಲ್ ಸೊಸೈಟಿಯ ಆವರಣದ ಗೋಡೆ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಬುಲ್ಡೋಜರ್ ಮೂಲಕ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡಿರುವ 9 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಕೆಲವು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದ್ದಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!