March 24, 2026

ಮೂಲ್ಕಿ: ಗಾಳ ಹಾಕಿ ಮೀನು ಹಿಡಿಯಲೆಂದು ತೆರಳಿದ್ದ ವ್ಯಕ್ತಿ ನದಿಗೆ ಬಿದ್ದು ಮೃತ್ಯು

0
image_editor_output_image535757184-1663739503521.jpg

ಮೂಲ್ಕಿ: ಪಾವಂಜೆಯ ಸೇತುವೆಯ ಕೆಳಗೆ ಗಾಳ ಹಾಕಿ ಮೀನು ಹಿಡಿಯಲೆಂದು ತೆರಳಿದ್ದ ವೃದ್ಧರೋರ್ವರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸೆ. 20 ರಂದು ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಮೂಲ್ಕಿ ಕೆ.ಎಸ್.ರಾವ್ ನಗರದ ನಿವಾಸಿ ಈಶ್ವರ (63) ಎಂದು ಗುರುತಿಸಲಾಗಿದೆ. ಈಶ್ವರ ಅವರಿಗೆ ಗಾಳ ಹಾಕಿ ಮೀನು ಹಿಡಿಯುವ ಹವ್ಯಾಸ ಇದ್ದು, ಸಂಜೆ ಮನೆಯಿಂದ ಪಾವಂಜೆಯ ಸೇತುವೆಯ ಕೆಳಗೆ ಗಾಳ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಮೂಲ್ಕಿ ಪೊಲೀಸರು, ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲೆತ್ತಿದ್ದು, ಮೂಲ್ಕಿ ಕಾರ್ನಾಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದಾರೆ. ಘಟನೆ ಮೂಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!