ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಆರೋಪಿ ಆತ್ಮಹತ್ಯೆಗೆ ಯತ್ನ:
ಶಿಕ್ಷಣ ಇಲಾಖೆಯ ಮೂವರು ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ
ಮಂಗಳೂರು: ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಸೋಮವಾರ ಆರೋಪಿಯೊಬ್ಬ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ.
ನಗರದಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮೂವರು ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್ ಶೆಟ್ಟಿ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕಳೆದ ಸೆಪ್ಟೆಂಬರ್ ನಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬೆಡ್ ಶೀಟ್ ಬಳಸಿಕೊಂಡು ಕಿಟಕಿಗೆ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.





