ಕಲಬುರಗಿ ಜಿಲ್ಲೆಯಲ್ಲಿ ಹಲವು PFI ಮುಖಂಡರ ಮನೆಗಳ ಮೇಲೆ NIA ದಾಳಿ: ಪಿಎಫ್‌ಐ ಜಿಲ್ಲಾ ಅಧ್ಯಕ್ಷ, ಪಿಎಫ್‌ಐ ರಾಜ್ಯ ಸಮಿತಿಯ ಸದಸ್ಯ ವಶಕ್ಕೆ
ಕಲಬುರಗಿ: ಜಿಲ್ಲೆಯಲ್ಲಿ ಹಲವು ಪಿಎಫ್ಐ ಮುಖಂಡ ಮನೆಗಳ ಮೇಲೆ ಗುರುವಾರ ಬೆಳಗ್ಗೆ ಎನ್ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಇದೇವೇಳೆ ಇಬ್ಬರು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಪಿಎಫ್‌ಐ ಜಿಲ್ಲಾ ಅಧ್ಯಕ್ಷ ಶೇಖ್ ಇಜಾಝ್ ಅಲಿ ಮತ್ತು ಪಿಎಫ್‌ಐ ರಾಜ್ಯ ಸಮಿತಿಯ ಸದಸ್ಯ ಶಾಹೀದ್ ನಸೀಬ್ ಅವರನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಗರದ ಟಿಪ್ಪು ಸುಲ್ತಾನ್ ಚೌಕ್ ಬಳಿಯಿರುವ ಪಿಎಫ್ಐ ಜಿಲ್ಲಾ ಅಧ್ಯಕ್ಷ ಶೇಖ್ ಇಜಾಝ್ ಅಲಿಯವರ ಮನೆ ಸೇರಿದಂತೆ ಹಲವರ ಮನೆಗಳ ಎನ್ಐಎ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ಶೇಖ್ ಇಜಾಝ್ ಅಲಿ ಮತ್ತು ಪಿಎಫ್‌ಐ ರಾಜ್ಯ ಸಮಿತಿಯ ಸದಸ್ಯ ಶಾಹೀದ್ ನಸೀಬ್ ಅವರನ್ನು ಎನ್ಐಎ ವಶಕ್ಕೆ ಪಡೆದಿರುವುದನ್ನು ಖಂಡಿಸಿ ಪಿಎಫ್ಐ ಕಾರ್ಯಕರ್ತರು ನಗರದ ಟಿಪ್ಪು ಚೌಕ್ ಬಳಿ ಧರಣಿ ನಡೆಸಿದರು.




