March 24, 2026

3 ದಿನಗಳಿಂದ ಗೃಹ ಸಚಿವಾಲಯದಲ್ಲಿ ದಾಳಿಯ ವಿಶೇಷ ಸಭೆ: ಪ್ರತ್ಯೇಕ 6 ಕಂಟ್ರೋಲ್‌ ರೂಮ್‌ ಸ್ಥಾಪನೆ

0
image_editor_output_image890485771-1663837389235.jpg

ನವದೆಹಲಿ: ಕಳೆದ ಮೂರು ದಿನಗಳಿಂದ ಗೃಹ ಸಚಿವಾಲಯದ ಅಧಿಕಾರಿಗಳು ಸಭೆ ನಡೆಸಿ ಪ್ರತ್ಯೇಕ ಕಂಟ್ರೋಲ್‌ ರೂಮ್‌ ತೆರೆದು ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(PFI) ಪಿಎಫ್‌ಐ ಮೇಲೆ ದಾಳಿ ನಡೆಸಿದೆ ಎಂದು‌ ಖಾಸಗಿ ಸುದ್ದಿವಾಹಿನಿಗಳು ವರದಿ ಮಾಡಿದೆ.

ಇಲ್ಲಿಯವರೆಗೆ ಕೆಲ ಜಾಗಗಳಲ್ಲಿ ಎನ್‌ಐಎ (NIA) ದಾಳಿ ನಡೆಸಿದ್ದರೆ, ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಇಡಿ ಜೊತೆ ಸೇರಿ ದೇಶದ 11 ರಾಜ್ಯಗಳಲ್ಲಿ ದಾಳಿ ನಡೆಸಲಾಗಿದ್ದು, NIA ಇತಿಹಾಸದಲ್ಲೆ ಬಹುದೊಡ್ಡ ದಾಳಿ ಇದಾಗಿದೆ. ದೇಶದಲ್ಲಿ 100ಕ್ಕೂ ಹೆಚ್ಚಿನ ಪಿಎಫ್ಐ ನಾಯಕರನ್ನು ಬಂಧಿಸಿರುವುದಾಗಿ ವರದಿಯಾಗಿದೆ.

ಏನಿದು ಸಭೆ?
ಮೂರು ದಿನಗಳ ಹಿಂದೆಯಷ್ಟೇ ಇಡಿ, ಎನ್‌ಐಎ ಹಾಗೂ ಗುಪ್ತಚರ ಇಲಾಖೆ (Intelligence Bureau) ಅಧಿಕಾರಿಗಳೊಂದಿಗೆ ಗೃಹ ಸಚಿವಾಲಯವು ಸಭೆ ನಡೆಸಿದೆ. ಇಲ್ಲಿಯವರೆಗೆ ಯಾವೆಲ್ಲ ಪ್ರಕರಣ ದಾಖಲಾಗಿದೆ? ಈ ಎಲ್ಲಾ ವಿಚಾರಗಳನ್ನು ಮಾಹಿತಿ ಕಲೆ ಹಾಕಿ ಚರ್ಚೆ ನಡೆಸಲಾಗಿತ್ತು.

ಅದಕ್ಕಾಗಿ 6 ಕಂಟ್ರೋಲ್‌ ರೂಂಗಳನ್ನು ತೆರಲಾಗಿತ್ತು. ಪ್ರತಿ ರಾಜ್ಯದಲ್ಲಿರುವ ನಾಯಕರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ಸಭೆ ನಡೆದ ತಡರಾತ್ರಿಯಿಂದಲೇ ಕಾರ್ಯಾಚರಣೆ ಆರಂಭವಾಗಿತ್ತು.

ಪಿಎಫ್‌ಐ ಕಾರ್ಯಕರ್ತರು ಗಲಾಟೆ ಮಾಡಬಹುದು ಎಂಬ ಕಾರಣಕ್ಕೆ ಬಹುತೇಕ ಕಡೆ ರಾತ್ರಿಯೇ ಕಾರ್ಯಚರಣೆ ನಡೆಸಿ ನಾಯಕರನ್ನು ಬಂಧಿಸಲಾಗಿದೆ. 

Leave a Reply

Your email address will not be published. Required fields are marked *

error: Content is protected !!