March 24, 2026

ವಿಟ್ಲ: ಬೊಲೆರೊ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಮಹಿಳೆ, ಮಗು ಸಹಿತ ಮೂವರಿಗೆ ಗಾಯ

0
IMG-20220923-WA0009

ವಿಟ್ಲ: ಬೊಲೆರೊ ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಮೂವರು ಗಾಯಗೊಂಡ ಘಟನೆ ವಿಟ್ಲ-ಪುತ್ತೂರು ರಸ್ತೆಯ ಉರಿಮಜಲಿನಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೊ ಜೀಪು ನಡುವೆ ಈ ಅಪಘಾತ ಸಂಭವಿಸಿದೆ.
ಬೈಕ್ ನಲ್ಲಿದ್ದ ಕನ್ಯಾನ ನಿವಾಸಿಗಳಾದ ಸವಾರ, ಮಹಿಳೆ ಮತ್ತು ಮಗು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಡಿ ಗ್ರೂಫ್ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಬೈಕ್ ಜೀಪಿನಡಿಗೆ ನುಗ್ಗಿದ್ದು, ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

error: Content is protected !!