March 24, 2026

ರಸ್ತೆ ಅಪಘಾತ: 12 ಮಂದಿ ಸ್ಥಳದಲ್ಲೇ ಮೃತ್ಯು, 18 ಮಂದಿ ಗಾಯ

0
image_editor_output_image1504480634-1663912916224.jpg

ಕಠ್ಮಂಡು: ನೇಪಾಳದ ಬಾಗಮತಿ ಪ್ರದೇಶದಲ್ಲಿ ಗುರುವಾರ ರಾತ್ರಿ ಸಂಭವಿಸಿದ ಬಸ್‌ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 18 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಠ್ಮಂಡುವಿನಿಂದ ಬಿರ್‌ಗುಂಜ್‌ನತ್ತ ಸಾಗುತ್ತಿದ್ದ ಮಿನಿಬಸ್‌ ಮಕವಾನ್‌ಪುರ ಜಿಲ್ಲೆಯ ಬಾಗಮತಿ ಪ್ರದೇಶದ ಜುರಿಖೇತ್‌ನ ಕಡಿದಾದ ತಿರುವಿನಲ್ಲಿ ಅಪಘಾತವಾಗಿ ಉರುಳಿದೆ.

‘ಸ್ಥಳದಲ್ಲೇ 6 ಮಂದಿ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ನೇಪಾಳದ ಪಶ್ಚಿಮ ಭಾಗದ ಭುಮೆ ಪುರಸಭೆಗೆ ಸೇರಿದ ಯಾಂಗ್‌ಸಿ ಬಾಗರ್‌ ಎಂಬ ಪ್ರದೇಶದಲ್ಲಿ ಸಂಭವಿಸಿದ ಮತ್ತೊಂದು ರಸ್ತೆ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. 13 ಮಂದಿ ಗಾಯಗೊಂಡಿದ್ದಾರೆ.

ಕಠ್ಮಂಡುವಿನಿಂದ ರುಕುಮ್‌ಕೋಟ್‌ಗೆ ಪ್ರಯಾಣಿಸುತ್ತಿದ್ದ ಬಸ್‌ ಅಪಘಾತಕ್ಕೀಡಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಒಟ್ಟು 13 ಮಂದಿ ಗಾಯಗೊಂಡಿದ್ದು, ಈ ಪೈಕಿ ಮೂವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ರುಕುಮ್‌ಕೋಟ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!