September 27, 2026

ಮಂಗಳೂರು : ಬಂಧಿತನಾಗಿರುವ ಶಂಕಿತ ಉಗ್ರನ ಮಾಝ್ ನ ತಂದೆ ಹೃದಯಾಘಾತದಿಂದ ಸಾವು

0
image_editor_output_image184906069-1663941844524

ಮಂಗಳೂರು: ಭಯೋತ್ಪಾದಕ ಸಂಘಟನೆಗಳ ಜೊತೆಗೆ ನಂಟು ಸಾಧಿಸಿದ್ದಾನೆಂಬ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧಿತನಾಗಿದ್ದ ಆರೋಪಿ ಯುವಕನೋರ್ವನ ತಂದೆ ಮಂಗಳೂರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ.

ಶಂಕಿತ ಆರೋಪಿ ಮಾ‌‌ಝ್ ಮುನೀರ್ ಅಹಮದ್ ಅವರ ತಂದೆ ಮುನೀರ್ ಅಹ್ಮದ್ ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಂಜೆ 5 ಗಂಟೆಗೆ ನಿಧನರಾಗಿರುವುದಾಗಿ ವರದಿಯಾಗಿದೆ.

 

ಮೃತ ಮುನೀರ್ ಅಹ್ಮದ್‌ರವರು ತೀರ್ಥಹಳ್ಳಿಯ ಮಾಜಿ ಪುರಸಭಾ ಸದಸ್ಯ ಕಾಂಗ್ರೆಸ್ ಮುಖಂಡ ದಿವಂಗತ ಸಾಬ್ಜಾನ್ ಸಾಹೇಬರವರ ಮಗನಾಗಿದ್ದರು. ಮೃತದೇಹವನ್ನು ರಾತ್ರಿ ತೀರ್ಥಹಳ್ಳಿಗೆ ತರಬಹುದೆಂದು ಕುಟುಂಬ ಮೂಲಗಳು ತಿಳಿಸಿವೆ.

ಮುನೀರ್ ಅಹಮ್ಮದ್‌ರವರ ಮನೆ ತೀರ್ಥಹಳ್ಳಿ ಮೀನು ಮಾರ್ಕೆಟ್ ಹತ್ತಿರ ಸೊಪ್ಪುಗುಡ್ಡೆ ಎಂಬಲ್ಲಿದ್ದರೂ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಗ್ಗುಲಿನಲ್ಲಿ ಮನೆ ಮಾಡಿ ನೆಲೆಸಿದ್ದರು ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

You may have missed

error: Content is protected !!