March 24, 2026

ಮಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ: ಹಾಸ್ಟೇಲ್ ನ ಕಿಟಕಿ ಮುರಿದು ನಾಪತ್ತೆಯಾಗಿದ್ದರು.

0
image_editor_output_image-597526439-1663994229390

ಮಂಗಳೂರು: ಇಲ್ಲಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಕಿಟಕಿ‌ ಮುರಿದು ಬುಧವಾರ ಮುಂಜಾನೆ 3-30ರ ವೇಳೆಗೆ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ .

ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಮುತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಿದ್ಯಾರ್ಥಿನಿಯರ ಪೋಷಕರೊಂದಿಗೆ ಕೊಯಮುತ್ತೂರಿಗೆ ತೆರಳಿದ್ದರು. ಅಲ್ಲದೆ ಮಂಗಳೂರು ಪೊಲೀಸರು ಚೆನ್ನೈಯ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿದ ಪೊಲೀಸರು ಬಳಿಕ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಿದ್ದರು. ಅಲ್ಲಿಂದ ಇದೀಗ ಮಂಗಳೂರಿಗೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!