September 27, 2026

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕೃತ

0
image_editor_output_image-311177127-1663997133629.jpg

ಚಿತ್ರದುರ್ಗ/ಶಿವಮೊಗ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ.

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಸೆ.1ರಂದು ಬಂಧಿಸಲಾಗಿದೆ. ಹೀಗಾಗಿ ಅವರು ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

 

ಇದಕ್ಕೆ ತಕರಾರು ಸಲ್ಲಿಸಿದ್ದ ವಿಶೇಷ ಸರ್ಕಾರಿ ವಕೀಲೆ ಕೆ.ಬಿ. ನಾಗವೇಣಿ, ‘ಬಂಧಿತ ಆರೋಪಿ ಪ್ರಭಾವಿಯಾಗಿದ್ದು, ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ’ ಎಂದು ವಾದಿಸಿದ್ದರು.

ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಅವರು ವಕೀಲರ ವಾದವನ್ನು ಪರಿಗಣಿಸಿದ್ದು, ಶರಣರ ಅರ್ಜಿ ತಿರಸ್ಕರಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!