ಕುವೈತ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು
ಮಂಗಳೂರು: ಕುವೈತ್ ನಲ್ಲಿ ಶುಕ್ರವಾರ ನಡೆದ ರಸ್ತೆ ಅಪಘಾತವೊಂದರಲ್ಲಿ ನಗರದ ಪಡೀಲ್ ಸಮೀಪದ ಬಜಾಲ್ ಪಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (33) ಮೃತಪಟ್ಟಿದ್ದಾರೆ. ಮೃತರು ಪತ್ನಿ, ತಾಯಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕುವೈತ್ ನ ಕಂಪೆನಿಯೊಂದರಲ್ಲಿ ಸೇಲ್ಸ್‌ಮ್ಯಾನ್ ಆಗಿದ್ದ ಆಸೀಫ್ ಪಕ್ಕಲಡ್ಕ, ಶುಕ್ರವಾರ ಸಂಜೆ ಕೆಲಸ ಮುಗಿಸಿ ತನ್ನ ರೂಮಿಗೆ ಬೈಕ್‌ನಲ್ಲಿ ಮರಳುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆಯಿತು ಎನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಆಸೀಫ್ ಪಕ್ಕಲಡ್ಕ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ.