ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಸಮಿತಿಯ ವಿಶೇಷ ಸಭೆ:
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಸಮಿತಿಯ ವಿಶೇಷ ಸಭೆಯು ಜಿಲ್ಲಾ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಂಘಟನೆಯ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿಂದ ಬಂದ ಬಸವರಾಜ್ ರವರು ಭಾಗವಹಿಸಿ, ಇದೇ 26 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಪ್ರಚಾರ ಸಮಿತಿಯ ಕಾರ್ಯಾಧ್ಯಕ್ಷ ಎಂ ಬಿ ಪಾಟೀಲ್ ರವರ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.
,
ಜಿಲ್ಲಾ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬಂದ ಪಂಚಾಯತ್ ರಾಜ್ ಸಂಘಟನೆ ಸಮಿತಿಯ ಸದಸ್ಯರನ್ನು ಉದ್ದೇಶಿಸಿ, ಸಭೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಣೆ ನೀಡಿದರು. 26ನೇ ತಾರೀಕು ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದ ಪಂಚಾಯತ್ ಸಂಘಟನೆ ಪದಾಧಿಕಾರಿಗಳು ಹಾಗೂ ಸದಸ್ಯರು, ಬೆಳಿಗ್ಗೆ 10:30 ಗಂಟೆಗೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ಸು ಗೊಳಿಸಬೇಕು, ಅದೇ ರೀತಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮದಲ್ಲಿ ನಾವೆಲ್ಲರೂ ಭಾಗವಹಿಸಬೇಕೆಂದು ವಿನಂತಿಸಿದರು.
ಈ ಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಸುಭೋದ ಆಳ್ವ, ಉಪಸ್ಥಿತರಿದ್ದರು.
ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಂತೋಷ್ ಭಂಡಾರಿ ಸ್ವಾಗತಿಸಿದರು.