March 24, 2026

ನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ: ಮಹಿಳೆ ಸಹಿತ ಇಬ್ಬರಿಗೆ ಗಾಯ

0
image_editor_output_image2015287528-1664079777996

ನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಹಾಸನದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿದ್ದು, ಘಟನೆಯಿಂದಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡಗೊಂಡಿದ್ದಾರೆ.

ಗಾಯಗೊಂಡ ಪ್ರಯಾಣಿಕರನ್ನು ನೆಲ್ಯಾಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!