March 24, 2026

ಪುತ್ತೂರು: ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ಸಮೀಪ ನಡೆದ ಶೂಟೌಟ್ ಪ್ರಕರಣ: ತಲೆಮರೆಸಿಕೊಂಡಿದ್ದ ವಿಟ್ಲದ ಜೋಗಿ ಹನೀಫ್ ಬಂಧನ

0
image_editor_output_image-1471242271-1664081420213

ಪುತ್ತೂರು : ಇಲ್ಲಿನ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ಸಮೀಪ 2019ರಲ್ಲಿ ನಡೆದ ಶೂಟೌಟ್ ಪ್ರಕರಣದ ಆರೋಪಿಯಾಗಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಸಮೀಪದ ಕೇಪು ಗ್ರಾಮದ ಆರೋಪಿ ಹನೀಫ್ ಯಾನೆ ಜೋಗಿ ಹನೀಫ್ ಬಂಧಿತ ಆರೋಪಿ.

ಆರೋಪಿ ಹನೀಫ್ 2019 ರಲ್ಲಿ ಕೊಡಿಪ್ಪಾಡಿ ಗ್ರಾಮದ ಕಲ್ಲಂದಡ್ಕ ನಿವಾಸಿ ಕೆ ಅಬ್ದುಲ್ ಖಾದರ್ ಎಂಬವರ ಮೇಲೆ ನಡೆದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿದ್ದ. ಬಳಿಕ ನ್ಯಾಯಾಲಯದಲ್ಲಿ ಜಾಮೀನು ಪಡೆದು ವಿಚಾರಣೆ ವೇಳೆ ತಲೆಮರೆಸಿಕೊಂಡಿದ್ದ.

ಸುಮಾರು ಒಂದು ವರ್ಷದಿಂದ ವಾರಂಟಿನಲ್ಲಿ ತಲೆಮರೆಸಿ ಕೊಂಡು ಮುಂಬಯಿಯಲ್ಲಿದ್ದ. ಹನೀಫ್ ಒಂದು ವಾರದ ಹಿಂದೆ ವಿಟ್ಲಕ್ಕೆ ಬಂದ ಕುರಿತು ಮಾಹಿತಿ ಪಡೆದ ಪುತ್ತೂರು ಪೊಲೀಸರು ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಮತ್ತು ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ್ ಅವರ ಮಾರ್ಗದರ್ಶನದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಮತ್ತು ಎಸ್ ಐ ಶ್ರೀಕಾಂತ್ ರಾಥೋಡ್ ನೇತೃತ್ವದಲ್ಲಿ ಹೆಡ್ ಕಾನ್ ಸ್ಟೇಬಲ್ ಪರಮೇಶ್ವರ, ಕುಮಾರ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!