March 24, 2026

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

0
image_editor_output_image-274634877-1664170531856.jpg

ಶಿರಸಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನೋರ್ವನನ್ನು ಶಿರಸಿ‌ ಮಾರುಕಟ್ಟೆ ಪೊಲೀಸರು ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.

ಆರೋಪಿತ ಚಿಕನ್ ವ್ಯಾಪಾರಿ ಶಕೀಲ್ ಅಹಮ್ಮದ ಅನ್ವರ ಸಾಬ್ ಶೇಖ್ (20 ).

ಆರೋಪಿತನು ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅವಳನ್ನು ಒತ್ತಾಯದಿಂದ ಬೈಕ್ ನಲ್ಲಿ ಮೇಲಾಗಿ ಹೊಟೇಲ್‌ಗೆ ಕರೆದುಕೊಂಡು ಹೋಗಿ ಕೋಣೆಯಲ್ಲಿ ಪ್ರೀತಿ ಮಾಡುತ್ತೇನೆ ಎಂದು ಲೈಂಗಿಕ ದೌರ್ಜನ್ಯ ಎಸಗಿದ ಎಂದು ಆರೋಪಿಸಿ ದೂರು ನೀಡಲಾಗಿದೆ.

ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!