ಪುತ್ತೂರು: ಎರಡು ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಗಂಭೀರ
ಪುತ್ತೂರು: ಎರಡು ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪಡೀಲ್ ಸಮೀಪದ ಹಾರಾಡಿಯಲ್ಲಿ ನಡೆದಿದೆ.
ಒಂದು ಆಟೋ ರಿಕ್ಷಾ ಮತ್ತು ಬೈಕ್ ಬೊಳುವಾರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದು, ಮತ್ತೊಂದು ಆಟೋ ರಿಕ್ಷಾ ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದು, ಹಾರಾಡಿಯಲ್ಲಿ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಟೋ ರಿಕ್ಷಾಗಳ ಮುಂಭಾಗ ನಜ್ಜುಗುಜ್ಜಾಗಿದ್ದು, ಆಟೋ ಚಾಲಕ ಕೂಡ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.