ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಪಲ್ಟಿ: ಒರ್ವ ಮೃತ್ಯು, ನಾಲ್ವರು ಗಾಯ
ಭಟ್ಕಳ: ವಿದ್ಯಾರ್ಥಿಗಳು ಪ್ರಯಣಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಒರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಸಂಭವಿಸಿದೆ.
ಮೃತ ಯುವಕ ರಂಗಿನ ಕಟ್ಟೆಯ ಉನ್ಯಜ್ ಹಮ್ಜದ್ ಖತೀಬ್ ಎಂದು ತಿಳಿದು ಬಂದಿದೆ.
ಕುಂದಾಪುರದಿಂದ ಭಟ್ಕಳದ ಕಡೆಗೆ ಅತಿವೇಗದಿಂದ ಕಾರನ್ನು ಚಲಾಯಿಸಿಗೊಂಡು ಹೆದ್ದಾರಿಯ ಡಿವೈಡರಿಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ