ಕಣ್ಣೂರು: ಏರ್ ಇಂಡಿಯಾ ವಿಮಾನ ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಢಿಕ್ಕಿ, ವಿಮಾನ ತುರ್ತು ಭೂಸ್ಪರ್ಶ
ಕಣ್ಣೂರು: ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಟೇಕಾಪ್ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ಏರ್ ಇಂಡಿಯಾ ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಟೇಕಾಫ್ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ತಕ್ಷಣ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಇನ್ನು ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಕಾರಣ ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಇಳಿಸಲಾಗಿದ್ದು, ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಯಾವುದೇ ಅಪಾಯವಾಗಿಲ್ಲ ಎಂದು ಏರ್ ಇಂಡಿಯಾದ ಅಧಿಕಾರಿಗಳು ತಿಳಿಸಿದ್ದಾರೆ.