ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ: ಮೂವರು ಪೊಲೀಸ್ ವಶಕ್ಕೆ
ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬರ ಮೇಲೆ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಎರಡೂ ಗುಂಪುಗಳ ನಡುವೆ ವಾಗ್ವಾದ ನಡೆದಿದೆ.
ಇನ್ನು ಈ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.