ಭಾರೀ ಮಳೆಯಿಂದ ಚೆನ್ನೈನ ತಗ್ಗು ಪ್ರದೇಶಗಳು ಜಲಾವೃತ:
ನಾಲ್ವರು ಮೃತ್ಯು
ಚೆನ್ನೈ: ಮಳೆಯಿಂದ ತತ್ತರಿಸಿ ಹೋಗಿರುವ ಚೆನ್ನೈ ಮತ್ತು ತಮಿಳುನಾಡಿನ ಹಲವಾರು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮಂಗಳವಾರ ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕಳೆದೆರಡು ದಿನಗಳಿಂದ ಚೆನ್ನೈನ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಮಳೆಯಿಂದಾಗಿ ತಮಿಳುನಾಡಿನಲ್ಲಿ ಈಗಾಗಲೇ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ವರದಿ ತಿಳಿಸಿದೆ.
ಆಗ್ನೇಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಪಕ್ಕದಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ನೀಲಗಿರಿ, ಕೊಯಮತ್ತೂರು, ದಿಂಡಿಗಲ್, ಥೇಣಿ, ತೆಂಕಶಿ ಮತ್ತು ತಿರುನಲ್ವೇಲಿ ಸೇರಿದಂತೆ ಸುಮಾರು 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.





