ನಿಂತಿದ್ದ ಲಾರಿಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಯುವಕ ಮೃತ್ಯು
ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಯುವಕ ಮೃತಪಟ್ಟ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ದೀಪಕ್ (26) ಸಾವನ್ನಪ್ಪಿದ ಯುವಕ. ಬೆಂಗಳೂರಿನ ನೈಸ್ ರೋಡ್‍ನಲ್ಲಿ ಸೋಮವಾರ ಈ ಘಟನೆ ನಡೆದಿತ್ತು. ಅಪಘಾತದಲ್ಲಿ ದೀಪಕ್ ಮೆದುಳು ನಿಷ್ಕ್ರಿಯವಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿದ್ದಾನೆ.
ಘಟನೆಗೆ ಸಂಬಂಧಿಸಿ ದೀಪಕ್ ಕುಟುಂಬಸ್ಥರು ಮೃತನ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‌ಆರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಲು ಸಿದ್ಧತೆ ನಡೆಸಿದ್ದಾರೆ.




