March 24, 2026

40 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ ಪಲ್ಟಿ: ಓರ್ವ ವಿದ್ಯಾರ್ಥಿ ಸಾವು

0
image_editor_output_image-776925010-1664272671008.jpg

ಮಧ್ಯಪ್ರದೇಶ: ಮಧ್ಯಪ್ರದೇಶದ ಸಾಗರ್‌ನ ರಹತ್‌ಗಢದಲ್ಲಿ 40 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಾಗರದ ಜಿಲ್ಲಾಧಿಕಾರಿ ದೀಪಕ್ ಆರ್ಯ ತಿಳಿಸಿದ್ದಾರೆ.

ಇನ್ನು ಅಪಘಾತ ಸಂಭವಿಸಿದಾಗ ಶಾಲಾ ಬಸ್‌ನ ಚಾಲಕ ಬಸ್ ಚಾಲನೆ ಮಾಡುವಾಗ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು, ಬಸ್ ಮಾಲೀಕ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!