ದೇಶದಲ್ಲಿ PFI ನಿಷೇಧಕ್ಕೆ ಕೇಂದ್ರದ ನೀಡಿದ ಐದು ಕಾರಣಗಳು ಏನು ಗೊತ್ತೇ?
ದಿಲ್ಲಿ: ಪಿಎಫ್ ಐ ಮತ್ತು ಸಹವರ್ತಿ ಸಂಘಟನೆಗಳ ನಿಷೇಧಕ್ಕೆ ಕೇಂದ್ರದ ಐದು ಕಾರಣಗಳನ್ನು ನೀಡಿದೆ.
1)ಪಿಎಫ್ ಐ ಸಂಘಟನೆಯನ್ನು ನಿಷೇಧಿಸಲು ಕೇಂದ್ರ ಸರ್ಕಾರ ನೀಡಿರುವ ಕಾರಣ, 2006ರಲ್ಲಿ ಕೇರಳದಲ್ಲಿ ಹುಟ್ಟುಹಾಕಿರುವ ಪಿಎಫ್ ಐ ಸಂಘಟನೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಮೂಲಕ ದೇಶದ ಭದ್ರತೆಗೆ ಅಪಾಯವನ್ನು ತಂದೊಡ್ಡಿದೆ ಮತ್ತು ಕೋಮು ಸೌಹಾರ್ದತೆ ಮತ್ತು ಶಾಂತಿಯನ್ನು ಹದಗೆಡಿಸಿರುವುದಾಗಿ ತಿಳಿಸಿದೆ.
2)ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಲ್ಲಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿತ್ತು.
3)ಪಿಎಫ್ ಐನ ಸ್ಥಾಪಕ ಮುಖಂಡರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ ಮೆಂಟ್ ಆಫ್ ಇಂಡಿಯಾ (ಸಿಮಿ)ಯ ಸದಸ್ಯರಾಗಿದ್ದಾರೆ. ಅಷ್ಟೇ ಅಲ್ಲ ಬಾಂಗ್ಲಾದೇಶದ ಜಮಾತ್ ಉಲ್ ಮುಜಾಹಿದೀನ್ ಜೊತೆ ಸಂಪರ್ಕ ಹೊಂದಿರುವುದಾಗಿ ಕೇಂದ್ರದ ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
4)ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಜಾಗತಿಕ ಭಯೋತ್ಪಾದಕ ಸಂಘಟನೆಗಳಾದ ಇರಾಕ್ ಮತ್ತು ಸಿರಿಯಾದಲ್ಲಿ ಕಾರ್ಯಾಚರಿಸುತ್ತಿರುವ ಐಸಿಸ್ ಜೊತೆ ಸಂಪರ್ಕ ಹೊಂದಿರುವುದಾಗಿ ಕೇಂದ್ರದ ಅಧಿಸೂಚನೆಯಲ್ಲಿ ವಿವರಿಸಿದೆ.
5)ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದೇಶದಲ್ಲಿ ಉಗ್ರವಾದ ಮತ್ತು ಅಭದ್ರತೆಯನ್ನು ಹುಟ್ಟುಹಾಕುತ್ತಿದೆ ಎಂದು ಕೇಂದ್ರ ತಿಳಿಸಿದೆ.