September 27, 2026

ಪುತ್ತೂರು: ಬೇಕರಿ, ವಿಎ ಆಫೀಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ

0
image_editor_output_image30550478-1664351878159.jpg

ಪುತ್ತೂರು: ಬೇಕರಿ ಹಾಗೂ ವಿಎ ಆಫೀಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೆ.28 ರಂದು ಸವಣೂರು ಪೇಟೆಯಲ್ಲಿ ನಡೆದಿದೆ.

ಯಾರೋ ಕಿಡಿಗೇಡಿಗಳು ಸವಣೂರು ಪೇಟೆಯಲ್ಲಿರುವ ಬೇಕರಿ ಹಾಗೂ ವಿಎ ಆಫೀಸ್ ಗೆ ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

 

ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಅಷ್ಟೇ ಅಲ್ಲದೇ ಸವಣೂರು ಗ್ರಾಮ ಪಂಚಾಯತ್ ಕಟ್ಟಡದಲ್ಲಿರುವ ಬೇಕರಿಯನ್ನು ಪುಡಿಮಾಡಿದ್ದು, ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!