ಚಲನಚಿತ್ರ ನಿರ್ಮಾಪಕಿ ಏಕ್ತಾ ಕಪೂರ್ ವಿರುದ್ಧ ಬಂಧನದ ವಾರೆಂಟ್
ಬೇಗುಸರಾಯ್ : ವೆಬ್ ಸರಣಿ ‘XXX’ ನಲ್ಲಿ ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ ಮತ್ತು ಅವರ ತಾಯಿ ಶೋಭಾ ಕಪೂರ್ ವಿರುದ್ಧ ಬುಧವಾರ ಬಂಧನ ವಾರೆಂಟ್ ಹೊರಡಿಸಿದೆ.
‘ಎಕ್ಸ್ ಎಕ್ಸ್ ಎಕ್ಸ್’ ವೆಬ್ ಸೀರಿಸ್ನ ಮೊದಲ ಸೀಸನ್ 2018ರಲ್ಲಿ ಪ್ರಸಾರವಾಗಿತ್ತು. 2020ರ ಜನವರಿಯಲ್ಲಿ ಎರಡನೇ ಸೀಸನ್ ಬಿಡುಗಡೆ ಆಯಿತು. ಇದರ ಪ್ರತಿ ಎಪಿಸೋಡ್ನಲ್ಲಿ ಎಪಿಸೋಡ್ಗಳಲ್ಲಿ ಬೇರೆ ಬೇರೆ ಕಥೆ ಇದೆ. ಲೈಂಗಿಕ ಸಂಬಂಧಗಳ ವಿವಿಧ ಆಯಾಮಗಳನ್ನು ಇಟ್ಟುಕೊಂಡು ಈ ಸಂಚಿಕೆಗಳು ಮೂಡಿಬಂದಿವೆ.
ಇದರಲ್ಲಿ ಸೈನಿಕರ ಕುಟುಂಬಕ್ಕೆ ಹಾಗೂ ಪತ್ನಿಯರಿಗೆ ಅವಮಾನ ಮಾಡಲಾಗಿದೆ ಎಂದು ಮಾಜಿ ಸೈನಿಕ ಮತ್ತು ಬೇಗುಸರಾಯ್ ನಿವಾಸಿ ಶಂಭು ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಧೀಶ ವಿಕಾಸ್ ಕುಮಾರ್ ನ್ಯಾಯಾಲಯವು ವಾರಂಟ್ ಹೊರಡಿಸಿದೆ.