November 21, 2024

ಗ್ರಾಮ ಪಂಚಾಯತ್ ಸದಸ್ಯನ ಪತ್ನಿ ನೇಣುಬಿಗಿದು ಆತ್ಮಹತ್ಯೆ

0

ಹುಬ್ಬಳ್ಳಿ: ಹತ್ಯೆಯಾದ ರಾಯನಾಳ ಗ್ರಾಮ ಪಂಚಾಯ್ತಿ ಸದಸ್ಯ ದೀಪಕ ಪಟದಾರಿ ಅವರ ಪತ್ನಿ ಪುಷ್ಪಾ ಪಟದಾರಿ (28) ಬುಧವಾರ ನವನಗರದ ಸಿಟಿ ಪಾರ್ಕ್‌ನಲ್ಲಿರುವ ಸಂಬಂಧಿಯ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೀಪಕ ಹತ್ಯೆ ಪ್ರಕರಣ ಕುರಿತು ಸಿಐಡಿ ತನಿಖೆ ಕೈಗೊಂಡ ಬೆನ್ನಲ್ಲೇ ಪುಷ್ಪಾ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕಿಮ್ಸ್‌ಗೆ ಕಳಿಸಲಾಗಿದ್ದು, ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸಿಪಿ ವಿನೋದ ಮುಕ್ತೇದಾರ, ಇನ್‌ಸ್ಪೆಕ್ಟರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದೀಪಕ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿದ್ದ ಪುಷ್ಪಾ ಅವರು ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಸಿಐಡಿ ತಿನಿಖೆ ಯಾವ ನಿಟ್ಟಿನಲ್ಲಿ ಸಾಗಲಿದೆ ಎಂಬ ಕುತೂಹಲ ಮನೆ ಮಾಡಿದೆ. ಆದರೆ, ತಂದೆ–ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!