September 28, 2026

ಸುಳ್ಯ: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, 14 ಜನರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0
image_editor_output_image1741840941-1664515030040.jpg

ಸುಳ್ಯ: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸಂತ್ರಸ್ತೆಯ ಅತ್ತಿಗೆ ಸೇರಿದಂತೆ 14 ಜನರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪ್ರಾಪ್ತ ಬಾಲಕಿಗೆ 2015ರ ಜನವರಿಯಿಂದ 2022ರ ಮೇ ವರೆಗೆ ವಿವಿಧ ಸ್ಥಳಗಳಲ್ಲಿ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

 

ಈ ಪ್ರಕರಣದ ಆರೋಪಿಗಳಾದ ವೇದಾವತಿ, ಆಕೆಯ ಆಪ್ತರಾದ ವಿನೋದ್ ಮಣಿಯಾಣಿ, ಪ್ರವೀಣ್, ದಯಾನಂದ, ಹನುಮಂತ, ಆನಂದ, ಪ್ರದೀಪ್, ಅಚ್ಚುತ, ಸತೀಶ್ ಗೌಡ, ಜಯಪ್ರಕಾಶ್, ಜಯಪ್ರಕಾಶ್ ಅವರ ಕಿರಿಯ ಸಹೋದರ ಮಂಕು ಮತ್ತು ಗುತ್ತಿಗಾರಿನ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಬಾಲಕಿ ಐದನೇ ತರಗತಿಯಲ್ಲಿ ಓದುತ್ತಿದ್ದಾಗ ಆಕೆಯ ಅತ್ತಿಗೆ ವೇದಾವತಿ ಮೊದಲ ಬಾರಿಗೆ ಲೈಂಗಿಕ ಕಿರುಕುಳ ನೀಡಿದ್ದಾಳೆ. ನಂತರ ಸಂತ್ರಸ್ತೆಗೆ ವಿವಿಧೆಡೆ ವಿವಿಧ ವ್ಯಕ್ತಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜತೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಪೋಕ್ಸೋ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ದೂರುದಾರರು ಕೋರಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!