ನಾಗರ ಹಾವಿಗೆ ಮುತ್ತಿಡಲು ಹೋಗಿ ತುಟಿಗೆ ಕಚ್ಚಿಸಿಕೊಂಡ ಉರಗ ರಕ್ಷಕ
ಶಿವಮೊಗ್ಗ: ನಾಗರ ಹಾವೊಂದಕ್ಕೆ ಮುತ್ತಿಡಲು ಹೋಗಿ ಉರಗ ರಕ್ಷಕನೊಬ್ಬ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಅಲೆಕ್ಸ್ ಎಂಬವರೇ ನಾಗರಹಾವಿನಿಂದ ಕಚ್ಚಿಸಿಕೊಂಡವರು. ಹಾವನ್ನು ಹಿಡಿದು ಅದಕ್ಕೆ ಮುತ್ತಿಡಲು ಮುಂದಾಗಿದ್ದ ತಕ್ಷಣ ಹಾವು ತಿರುಗಿ ತುಟಿಗೆ ಕಚ್ಚಿದೆ.
ಭದ್ರಾವತಿಯ ಅಲೆಕ್ಸ್ ಹಾಗೂ ರೋನಿ ಎಂಬುವರು ಉರಗ ರಕ್ಷಣೆಯಲ್ಲಿ ತೊಡಗಿಕೊಂಡಿದ್ದು, ಇತ್ತೀಚೆಗೆ ಭದ್ರಾವತಿಯ ಬೊಮ್ಮನಕಟ್ಟೆ ಮದುವೆ ಮನೆಯಲ್ಲಿ ಎರಡು ನಾಗರ ಹಾವುಗಳು ಒಟ್ಟಿಗೆ ಕಾಣಿಸಿಕೊಂಡಿವೆ. ಈ ವೇಳೆ ಹಾವು ಹಿಡಿದು ಅಲೆಕ್ಸ್ ಎಂಬಾತ ಅದಕ್ಕೆ ಮುತ್ತು ಕೊಡಲು ಮುಂದಾಗಿದ್ದಾನೆ. ಈ ವೇಳೆ ಹಾವು ತಿರುಗಿ ತುಟಿಗೆ ಕಚ್ಚಿದೆ. ನಂತರ ಹಾವುಗಳನ್ನು ಕಾಡಿಗೆ ಬಿಟ್ಟು ಭದ್ರಾವತಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದ.





