September 28, 2026

ಸೇಬು ತುಂಬಿದ್ದ ಟ್ರಕ್ ಪಲ್ಟಿ: ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವು

0
image_editor_output_image-1063542967-1664611820167.jpg

ಶಿಮ್ಲಾ: ಸೇಬು ತುಂಬಿದ್ದ ಟ್ರಕ್ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದು ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಛರಾಬ್ರಾ ಪ್ರದೇಶದಲ್ಲಿ ನಡೆದಿದೆ.

ಟ್ರಕ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

 

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಸಿಎಂ ಜೈರಾಮ್ ಠಾಕೂರ್, ಅಪಘಾತದಲ್ಲಿ ಮೂವರು ಪ್ರಾಣ ಕಳೆದುಕೊಂಡಿರುವುದು ತುಂಬಾ ದುಃಖಕರವಾದ ಸಂಗತಿಯಾಗಿದೆ. ಅಗಲಿದ ಆತ್ಮಗಳಿಗೆ ದೇವರು ಶಾಂತಿ ಕರುಣಿಸಲಿ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!