November 21, 2024

ಮಂಗಳೂರಿಗೆ ಬರುತ್ತಿದ್ದ ಬಸ್ ಅಪಘಾತ: 20ಕ್ಕಿಂತಲೂ ಅಧಿಕ‌ ಪ್ರಯಾಣಿಕರು ಗಂಭೀರ

0

ಉತ್ತರಕನ್ನಡ: ಟೆಂಪೋ ಮತ್ತು ಐರಾವತ ಬಸ್ ಪರಸ್ಪರ ಢಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ತೆರ್ನಮಕ್ಕಿ ಚರ್ಚ್ ಬಳಿ ಸಂಭವಿಸಿದೆ. ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್ ಹೊನ್ನಾವರದಿಂದ ಭಟ್ಕಳ ಕಡೆಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಢಿಕ್ಕಿಯ ರಭಸಕ್ಕೆ ಬಸ್ ಮುಂಭಾಗ, ಎಡಭಾಗ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರಿ ಹಾನಿಯಾಗಿದೆ. ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಭಟ್ಕಳ ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಗೋವಿಂದ ನಾಯ್ಕ ಕೂಡ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!