April 11, 2025

ಮಂಗಳೂರು: ಬಂಧಿತ ಪಿ ಎಫ್ ಐ ಮತ್ತು ಎಸ್ ಡಿ ಪಿ ಐ ನಾಯಕರಿಗೆ ಕೆಲವೇ ದಿನದಲ್ಲಿ ಜಾಮೀನು ಮಂಜೂರು

0

ದೇಶದಲ್ಲಿ ಪಿಎಫ್‌ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ನಿಷೇಧ ಮಾಡುವ ಒಂದು ದಿನದ ಮೊದಲು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ಐ, ಎಸ್‌ಡಿಪಿಐ ನಾಯಕರಿಗೆ ಜಾಮೀನು ನೀಡಲಾಗಿದೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಎಫ್ಐ, ಎಸ್‌ಡಿಪಿಐ ನಾಯಕರನ್ನು ಬಂಧಿಸಲಾಗಿದ್ದು, ಇಂದು ಹತ್ತು ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.ಇನ್ನು ಕೆಲದಿನಗಳ ಹಿಂದೆ ಎನ್‌ಐಎ ತಂಡ ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು ಇದನ್ನು ಖಂಡಿಸಿ ಮಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ಕೂಡ ನಡೆಸಿದ್ದರು. ಹೀಗಾಗಿ ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಿರಲಿ ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟಂಬರ್ 27ರಂದು ಮಂಗಳೂರಿನಲ್ಲಿ ಪೊಲೀಸರು ಸುಮಾರು ಹತ್ತಕ್ಕೂ ಹೆಚ್ಚು ಮಂದಿಯನ್ನು, ಸೆಕ್ಷನ್ 107, 151 ಅಡಿಯಲ್ಲಿ ವಶಕ್ಕೆ ಪಡೆದಿದ್ದು, ಇದೀಗ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!