ಕುಂದಾಪುರ: ಸಾಕು ನಾಯಿಯನ್ನು ಹೊತ್ತೊಯ್ದ ಚಿರತೆ ಕೊನೆಗೂ ಸೆರೆ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿನ ಶ್ರೀ ನಂದಿಕೇಶ್ವರ ದೇವಸ್ಥಾನ ಹಾಗೂ ಅಂಗನವಾಡಿ, ಶಾಲೆ ಪಕ್ಕದ ತೋಪಿನಲ್ಲಿ ಅರಣ್ಯ ಇಲಾಖೆಯಿಟ್ಟ ಬೋನಿನಲ್ಲಿ ಹೆಣ್ಣು ಚಿರತೆ ಸೆರೆಯಾಗಿದೆ.
ತೆಕ್ಕಟ್ಟೆ ಸಮೀಪದ ಮಾಲಾಡಿಯ ತೋಪಿನಿಂದ ಮುಂದೆ ಸಾಗಿದಾಗ ಸಿಗುವ ತೆಕ್ಕಟ್ಟೆ ಗ್ರಾ.ಪಂ ಅಧ್ಯಕ್ಷೆ ಮಮತಾ ದೇವಾಡಿಗರ ಪತಿ ಸುರೇಶ್ ದೇವಾಡಿಗರ ನಿವಾಸದ ತಿಂಗಳುಗಳ ಹಿಂದೆ ಪ್ರತ್ಯಕ್ಷವಾದ ಚಿರತೆ ಅವರ ಮನೆ ಸಾಕು ನಾಯಿಯನ್ನು ಹೊತ್ತೊಯ್ದಿತ್ತು. ಈ ಬಗ್ಗೆ ಮನೆಯವರಾದ ಸತೀಶ್ ದೇವಾಡಿಗ ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದು ನಿರಂತರ ಈ ಭಾಗದಲ್ಲಿ ಚಿರತೆ ಕಾಟವಿದ್ದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಇಲಾಖೆ ಬೋನ್ ಇಟ್ಟು ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಮುಂದಾಗಿತ್ತು. ತಿಂಗಳುಗಳಿಂದ ಚಿರತೆ ಪ್ರತ್ಯಕ್ಷವಾದ ತೋಪಿನಲ್ಲಿ ಬೋನು ಇಡಲಾಗಿದ್ದು ಅಂದಾಜು 4-5 ವರ್ಷ ಪ್ರಾಯದ ಹೆಣ್ಣು ಚಿರತೆ ಸೆರೆಯಾಗಿದೆ.