March 23, 2026

ದುರ್ಗಾ ಪೂಜೆಗೆ ಹಾಕಿದ್ದ ಪೆಂಡಾಲ್‍ಗೆ ಬೆಂಕಿ: ಮೂವರು ಮಕ್ಕಳು ಸೇರಿದಂತೆ ಐವರು ಸಾವು, 66 ಮಂದಿಗೆ ಗಾಯ

0
image_editor_output_image694247240-1664774202776.jpg

ಲಕ್ನೋ: ದುರ್ಗಾ ಪೂಜೆಗೆ ಹಾಕಿದ್ದ ಪೆಂಡಾಲ್‍ಗೆ ಬೆಂಕಿ ಹೊತ್ತುಕೊಂಡು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದು, 66 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಅವರು, ಔರೈ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗಾಪೂಜಾ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಒಟ್ಟು 66 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದೀಗ ಘಟನಾ ಸ್ಥಳಕ್ಕೆ ಡಿಎಂ ಮತ್ತು ಜಿಲ್ಲೆಯ ಇತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ 33 ಜನರನ್ನು ಸಮೀಪದ ವಾರಣಾಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!