ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ಬಸ್‌ನಲ್ಲಿದ್ದ ದಂಪತಿ ಮೃತ್ಯು

ಬೆಂಗಳೂರು ಗ್ರಾಮಾಂತರ: ಕಲ್ಲು ತುಂಬಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್‌ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಮತ್ತು ಕೋಲಾರ ರಸ್ತೆಯಲ್ಲಿ ನಡೆದಿದೆ.
ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯ ಮೈಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 20 ಮಂದಿ ಗಂಭೀರ ಗಾಯಗೊಂಡಿದ್ದಾರೆ.
ಮುಂಜಾನೆ ಮೂರು ಗಂಟೆ ಸುಮಾರಿನಲ್ಲಿ ಅಪಘಾತ ಸಂಭವಿಸಿವೆ. ಬಸ್ ಕೋಲಾರದಿಂದ ಬೆಂಗಳೂರಿಗೆ ಬರಬೇಕಾದರೆ ಹೊಸಕೋಟೆ ಬಳಿ ಅಪಘಾತವಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.