March 23, 2026

ಉಳ್ಳಾಲ: ಟ್ರಾಫಿಕ್ ಪೊಲೀಸ್ ಗೆ ಕಾರು ಢಿಕ್ಕಿ ಹೊಡೆದ ಕಾರು, ಪೊಲೀಸ್ ಸಿಬ್ಬಂದಿ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

0
image_editor_output_image475485928-1664775141924.jpg

ಉಳ್ಳಾಲ: ಟ್ರಾಫಿಕ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಡಿವೈಡರ್ ಮೇಲೆ ಎಸೆಯಲ್ಪಟ್ಟ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.

ಉಳ್ಳಾಲಬೈಲಿನಲ್ಲಿ ಘಟನೆ ನಡೆದಿದ್ದು ಗಾಯಗೊಂಡ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕೇಶ್ ನಾಯ್ಕ್ ಅವರನ್ನು ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕೇಶ್ ನಾಯ್ಕ್ ಮತ್ತು ಎಎಸ್ಐ ಮಂಜುಳಾ ಅವರು ಹೈವೇ ಪೆಟ್ರೋಲ್ ವಾಹನದಲ್ಲಿ ಭಾನುವಾರ ಸಂಜೆ ಉಳ್ಳಾಲಬೈಲಲ್ಲಿ ಗಸ್ತಿನಲ್ಲಿದ್ದ ವೇಳೆ ಘಟನೆ ನಡೆದಿದೆ.

ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ಸ್ವಿಫ್ಟ್ ಕಾರನ್ನ ಲೋಕೇಶ್ ಅವರು ತಪಾಸಣೆಗಾಗಿ ತಡೆದು ಬದಿಗೆ ನಿಲ್ಲುವಂತೆ ಸೂಚಿಸಿದ್ದರು. ಬದಿಗೆ ಬಂದಿದ್ದ ಕಾರು ಏಕಾಏಕಿ ಎದುರಲ್ಲಿದ್ದ ಲೋಕೇಶ್ ಗೆ ಬಲವಾಗಿ ಡಿಕ್ಕಿ ಹೊಡೆದು ಉಳ್ಳಾಲದ ಕಡೆಗೆ ಪರಾರಿಯಾಗಿದೆ.

Leave a Reply

Your email address will not be published. Required fields are marked *

error: Content is protected !!