February 3, 2026

ರಸ್ತೆಯಲ್ಲಿ ಜಗಳವಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ

0
image_editor_output_image932872676-1664798790109.jpg

ಉತ್ತರ ಪ್ರದೇಶ: ರಸ್ತೆಯಲ್ಲಿ ಜಗಳವಾಡುತ್ತಿದ್ದ ವಿದ್ಯಾರ್ಥಿಗಳಿಗೆ ವೇಗವಾಗಿ ಬಂದ ಕಾರು ಢಿಕ್ಕಿಯಾದ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇಲ್ಲಿನ ಮಸೂರಿ ಪ್ರದೇಶದ ರಸ್ತೆಯೊಂದರಲ್ಲಿ ವಿದ್ಯಾರ್ಥಿಗಳ ಗುಂಪೊಂದು ವಾಗ್ವಾದದಲ್ಲಿ ತೊಡಗಿತ್ತು. ಸ್ವಲ್ಪ ಸಮಯದ ಬಳಿಕ ವಿದ್ಯಾರ್ಥಿಗಳ ಗುಂಪು ಅಲ್ಲಿಂದ ಚದುರಿದ್ದು, ಇಬ್ಬರು ವಿದ್ಯಾರ್ಥಿಗಳು ರಸ್ತೆಯ ಇನ್ನೊಂದು ಬದಿಗೆ ನಡೆಯುವಾಗ ಕಾರು ತಮ್ಮ ಕಡೆಗೆ ಬರುವುದನ್ನು ಕಂಡು ಓಡಿದ್ದಾರೆ. ಆಗ ಕಾರಿನ ಚಾಲಕ ವಿದ್ಯಾರ್ಥಿಗಳು ಢಿಕ್ಕಿಯಾಗುವುದನ್ನು ತಪ್ಪಿಸಲು ಕಾರನ್ನು ಒಮ್ಮೆಲೆ ತಿರುಗಿಸಿದ್ದಾನೆ. ಓಡುತ್ತಿದ್ದ ವಿದ್ಯಾರ್ಥಿಗಳು ಮತ್ತು ತಿರುಗಿಸುವ ಭರದಲ್ಲಿ ಕಾರು ಮುಖಾಮುಖಿಯಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ವಿದ್ಯಾರ್ಥಿಯೊಬ್ಬ ಕಾರಿನ ಮೇಲೆ ಹಾರಿ ಕೆಳಗೆ ಬಿದ್ದಿದ್ದಾನೆ.

ಘಟನೆಯ ವೀಡಿಯೊ ವೈರಲ್ ಆಗಿದ್ದು, ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಕೆಲವು ವಿದ್ಯಾರ್ಥಿಗಳನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆಂದು ತಿಳಿದು ಬಂದಿದೆ. ವಿಚಾರಣೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿರುವುದಾಗಿ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!